ನಿತ್ಯ ಈರುಳ್ಳಿ ಸೇವನೆಯಿಂದ ಏನು ಉಪಯೋಗ ?

-ಈರುಳ್ಳಿಯಲ್ಲಿ ಆ್ಯಂಟಿ ಆಕ್ಸಿಡೆಂಟ್ ಹೆಚ್ಚಾಗಿದ್ದು, ಇದು ಹಿಸ್ಟಮೀನ್ ನ್ನು ಕಡಿಮೆ ಮಾಡುತ್ತದೆ. ದೇಹಕ್ಕೆ ಬರುವ ಅಲರ್ಜಿ ಹಾಗೂ ಅಸ್ತಮಾ ರೋಗಗಳಿಂದ ದೂರವಿಡುತ್ತದೆ. ಈರುಳ್ಳಿರಸಕ್ಕೆ ಜೇನುತುಪ್ಪ ಸೇರಿಸಿ ಸಮಪ್ರಮಾಣದಲ್ಲಿ ಸೇವಿಸುವುದರಿಂದ ಅಸ್ತಮಾದಿಂದ ದೂರವಿರಬಹುದು.
-ಈರುಳ್ಳಿಯಲ್ಲಿ ವಿಟಮಿನ್ ಸಿ ಅಂಶ ಇರುವುದರಿಂದ ಕ್ಯಾನ್ಸರ್ ನಂತಹ ರೋಗಗಳನ್ನು ತಡೆಗಟ್ಟಲು ಸಹಕಾರಿಯಾಗಿದೆ.
ಸಕ್ಕರೆ ಖಾಯಿಲೆಯಿಂದ ದೂರವಿರಬಹುದು.
-ಈರುಳ್ಳಿಯನ್ನು ಹೇರಳವಾಗಿ ತಿನ್ನುವುದರಿಂದ ಇದು ದೇಹದಲ್ಲಿ ಉತ್ಪತ್ತಿಯಾಗುವ ಗ್ಲೂಕೋಸ್ ನ್ನು ಕಡಿಮೆ ಮಾಡಿ, ಇನ್ಸುಲಿನ್ ನ್ನು ಹೆಚ್ಚಾಗುವಂತೆ ಮಾಡುತ್ತದೆ. ಇದರಿಂದ ನಾವು ಸಕ್ಕರೆ ಖಾಯಿಲೆಯಿಂದ ದೂರವಿರಬಹುದು.
-ಈರುಳ್ಳಿಯನ್ನು ಪ್ರತೀನಿತ್ಯ ಸೇವಿಸುವುದರಿಂದ ಬಾಯಿಯ ಆರೋಗ್ಯ ಉತ್ತಮವಾಗಿರುತ್ತದೆ. ಈರುಳ್ಳಿಯನ್ನು ಜಗಿದು ತಿನ್ನುವುದರಿಂದ ಇದು ಹಲ್ಲಿನ ಆರೋಗ್ಯವನ್ನು ಹೆಚ್ಚಿಸುತ್ತದೆ. ಪ್ರತೀ ನಿತ್ಯ 3 ನಿಮಿಷಕ್ಕಿಂತ ಹೆಚ್ಚಾಗಿ ಈರುಳ್ಳಿಯನ್ನು ಜಗಿಯುವುದರಿಂದ ಇದು ಹಲ್ಲಲ್ಲಿರುವ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ.
-ಈರುಳ್ಳಿ ದೇಹದ ಆರೋಗ್ಯವಷ್ಟೇ ಅಲ್ಲದೆ, ಸೌಂದರ್ಯ ವೃದ್ಧಿಗೂ ಸಹಕಾರಿಯಾಗಿದ್ದು, ಕೂದಲಿನ ಆರೈಕೆಗೆ ಉತ್ತಮ ಔಷಧವೆನ್ನಬಹುದು. ಈರುಳ್ಳಿಯಲ್ಲಿ ವಿಟಮಿನ್ ಎ ಹಾಗೂ ಸಿ ಇರುವುದರಿಂದ ಇದು ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಕೂದಲಿನ ಬುಡವನ್ನು ಗಟ್ಟಿಯಾಗಿಸುತ್ತದೆ. ಈರುಳ್ಳಿಯ ರಸವನ್ನು ಕೂದಲಿನ ಬುಡಕ್ಕೆ ಹಚ್ಚುತ್ತಾ ಬಂದರೆ ಕೂದಲು ಉದುರುವುದು ಕ್ರಮೇಣವಾಗಿ ನಿಯಂತ್ರಣಕ್ಕೆ ಬರುತ್ತದೆ. ಅಲ್ಲದೆ, ರಕ್ತ ಸಂಚಲನ ಸುಗಮವಾಗುತ್ತದೆ.
-ದಢೂತಿ ದೇಹ ಕರಗಿಸುವಲ್ಲಿಯೂ ಈರುಳ್ಳಿ ಸಹಕಾರಿಯಾಗುತ್ತದೆ. ಡಯಟ್ ಮತ್ತು ವ್ಯಾಯಾಮ ಮಾಡುವವರಿಗೆ ಕೊಬ್ಬನ್ನ ಕರಗಿಸಲು ಅನುಕೂಲಕರವಾಗಿದೆ. ಇದಕ್ಕೆ ಸ್ಪ್ರಿಂಗ್ ಆನಿಯನ್ ಹೆಚ್ಚು ಪರಿಣಾಮಕಾರಿಯಂತೆ.
-ನಿದ್ರಾಹೀನತೆಯಿಂದ ಬಳಲುತ್ತಿರುವವರಿಗೆ ಈರುಳ್ಳಿ ಒಳ್ಳೆಯ ಔಷಧಿ. ರಾತ್ರಿ ಊಟಕ್ಕೂ ಮುನ್ನ ಈರುಳ್ಳಿ ಸೂಪ್ ಸೇವಿಸಿದರೆ ಚೆನ್ನಾಗಿ ನಿದ್ರೆ ಬರುತ್ತದೆ.

Leave a Reply

Your email address will not be published. Required fields are marked *