ಮುಖ ಸೌಂದರ್ಯಕ್ಕಾಗಿ ಕೆಲ ಸರಳ ಟಿಪ್ಸ್

-ಟೊಮೆಟೊ ಹಣ್ಣಿನ ರಸವನ್ನು ಮುಖದ ಮೇಲೆ ಚೆನ್ನಾಗಿ ಹಚ್ಚಿಕೊಂಡು ಮಸಾಜು ಮಾಡಿಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

-ಸೌತೆಕಾಯಿಯ ಸ್ಲೈಸ್ ಗಳನ್ನು ಮಾಡಿಕೊಂಡು ಅದನ್ನು ನಿಧಾನವಾಗಿ ಮುಖದ ಮೇಲೆ ಉಜ್ಜಿಕೊಳ್ಳುವುದರಿಂದ ಮುಖದ ಚರ್ಮದಲ್ಲಿ ತೇವಾಂಶ ಹೆಚ್ಚುತ್ತದೆ. ಅಲ್ಲದೇ ಸ್ಲೈಸ್ ಗಳನ್ನು ಕಣ್ಣುಗಳ ಮೇಲೆ ಇಟ್ಟುಕೊಳ್ಳುವುದರಿಂದ ಕಣ್ಣಿನ ಉರಿ ಕಡಿಮೆಯಾಗುತ್ತದೆ.

-ರೋಸ್ ವಾಟರ್ ಅನ್ನು ಮುಖಕ್ಕೆ ಬಳಸುವುದರಿಂದ ಕಪ್ಪು ಚುಕ್ಕೆಗಳು ಕಡಿಮೆಯಾಗುತ್ತವೆ.

-ಹಾಲಿನ ಕೆನೆಯನ್ನು ಅರಿಸಿನ ಪುಡಿಯೊಂದಿಗೆ ಕಲಸಿಕೊಂಡು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಕಪ್ಪು ಚುಕ್ಕೆಗಳನ್ನು ತಡೆಗಟ್ಟಬಹುದು ಹಾಗೂ ಕಣ್ಣಿನ ಸುತ್ತಲಿನ ಕಪ್ಪು ಉಂಗುರವನ್ನು ಕಡಿಮೆ ಮಾಡಿಕೊಳ್ಳಬಹುದು.

-ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ನೆರಳಿನಲ್ಲಿ ಒಣಗಿಸಿ ಪುಡಿ ಮಾಡಿಕೊಳ್ಳಬೇಕು. ನಂತರ ಆ ಕಿತ್ತಳೆ ಪೌಡರನ್ನು ನೀರಿನೊಂದಿಗೆ ಕಲಸಿ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ.

-ಲಿಂಬೆ ಹಣ್ಣಿನ ರಸವನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಮುಖದ ಮೇಲಿನ ಬೆವರು ಗುಳ್ಳೆಗಳು ಕಡಿಮೆಯಾಗುತ್ತವೆ.

Leave a Reply

Your email address will not be published. Required fields are marked *