ಯಡಿಯೂರಪ್ಪ ವಿರುದ್ಧ ಸದಾನಂದ ಗೌಡರಿಂದ 2012ರಲ್ಲೇ ದ್ವೇಷದ ರಾಜಕಾರಣ ?!

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಎಸಿಬಿಯಲ್ಲಿ ಭ್ರಷ್ಟಾಚಾರ ಆರೋಪದ ಮೇರೆಗೆ ಎರಡು ಎಫ್ಐಆರ್ ದಾಖಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನ ಕಾಂಗ್ರೆಸ್ ಸದಸ್ಯ ವಿ.ಎಸ್.ಉಗ್ರಪ್ಪ ಇಂದು ಸುದ್ದಿಗೋಷ್ಠಿ ಕರೆದು ಮಾತನಾಡಿದ್ದು, 2012ರ ಏ.23ರಂದು ಅಂದಿನ ಸಿಎಂ ಸದಾನಂದಗೌಡ ಅವರೇ ಶಿವರಾಮಕಾರಂತ ಬಡಾವಣೆಯ ಡಿನೋಟಿಫಿಕೇಷನ್ ಬಗ್ಗೆ ತನಿಖೆ ನಡೆಸುವಂತೆ ಸಿಐಡಿಗೆ ಆದೇಶ ಹೊರಡಿಸಿದ್ದರು ಎಂದು ತಿಳಿಸಿ ದಾಖಲೆಗಳನ್ನೂ ಬಿಡುಗಡೆ ಮಾಡಿದ್ದಾರೆ.

ಈ ವೇಳೆ, ಸಿಎಂ ಸಿದ್ದರಾಮಯ್ಯ ಅವರು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಎಸಿಬಿ ದಾಖಲೆ ಸಂಗ್ರಹಿಸಿ ದೂರು ದಾಖಲಿಸಿಕೊಂಡಿದೆಯಷ್ಟೇ ಎಂದು ಸ್ಪಷ್ಟಪಡಿಸಿದ ಅವರು, ಸದಾನಂದಗೌಡ ಅವರೇ ಆದೇಶ ಹೊರಡಿಸಿದ್ದಾರೆ ಎಂದರೆ ಸ್ವಪಕ್ಷದವರೇ ದ್ವೇಷದ ರಾಜಕಾರಣ ಮಾಡಿದ್ದಾರೆ ಎಂದು ಏಕೆ ಹೇಳಬಾರದು ಎಂದು ಪ್ರಶ್ನಿಸಿದ ಅವರು, ದ್ವೇಷದ ರಾಜಕಾರಣ ಮಾಡುವುದು ಕಾಂಗ್ರೆಸ್ ನಾಯಕರಲ್ಲ, ಬದಲಿಗೆ ಬಿಜೆಪಿ ನಾಯಕರು ಎಂದು ಆರೋಪಿಸಿದರು.

ತಮ್ಮ ವಿರುದ್ಧ ದಾಖಲಾಗಿರುವ ಈ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಯಡಿಯೂರಪ್ಪ ಅವರೂ ಕೂಡ ಈಗಾಗಲೇ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *