ರೈತ ಸಂಘಟನೆಗಳೇ ಒಂದಾಗಿ ಹೋರಾಟ ಮಾಡಿ: ನಟ ಯಶ್ ಕರೆ

ರೈತ ಸಂಘಟನೆಗಳು ಒಂದಾಗಿ ಒಗ್ಗಟ್ಟಿನಿಂದ ಹೋರಾಟ ಮಾಡಿದಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಸಾಧ್ಯ ಎಂದು ಚಿತ್ರನಟ ಯಶ್ ಹೇಳಿದ್ದಾರೆ.
 

ಇಂದು ರೈತ ಸಂಘಟನೆಗಳು ಆಯೋಜಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯಶ್, ನಾವು ಒಬ್ಬರಿಗೊಬ್ಬರು ಬೆರಳು ತೋರಿಸುವುದು ಬಿಟ್ಟು ಸಮಸ್ಯೆಗಳನ್ನು ಪರಿಹರಿಸಲು ಒಂದಾಗುವುದು ಅಗತ್ಯ ಮತ್ತು ಅನಿವಾರ್ಯವಾಗಿದೆ ಎಂದರು.
 
ರಾಜ್ಯದಾದ್ಯಂತ ಭೀಕರ ಬರಗಾಲ ಎದುರಾಗಿದ್ದರಿಂದ ಸರಕಾರ ರೈತರ ಸಾಲ ಮನ್ನಾ ಮಾಡುವತ್ತ ಗಮನಹರಿಸಬೇಕು. ರೈತರ ಸಂಕಷ್ಟಗಳತ್ತ ಗಮನಹರಿಸಿ ಪರಿಹಾರ ಕಾರ್ಯಗಳಿಗಾಗಿ ಮುಂದಾಗಬೇಕು ಎಂದು ಮನವಿ ಮಾಡಿದರು.
 
ಮುಂಬರುವ ದಿನಗಳಲ್ಲಿ ಎಲ್ಲಾ ರೈತ ಸಂಘಟನೆಗಳು ಒಂದೇ ವೇದಿಕೆಯಡಿ ಕಾರ್ಯನಿರ್ವಹಿಸುವಂತಾಗಬೇಕು ಎನ್ನುವುದೇ ನಮ್ಮ ಬಯಕೆಯಾಗಿದೆ. ಯಾವುದೇ ರಾಜಕೀಯ ಉದ್ದೇಶವಿಟ್ಟುಕೊಂಡು ರೈತರ ಪರ ಹೋರಾಟ ಮಾಡುತ್ತಿಲ್ಲ ಎಂದು ಚಿತ್ರ ನಟ ಯಶ್ ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *